ಮಳೆ ಬರುವಾಗ ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು

ಮಳೆ ಬರುವಾಗ ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು

ಮಂಡ್ಯ;ಬೈಕ್‌ನಲ್ಲಿ ಪತ್ನಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ.

ಮದ್ದೂರಿನ ವೈದ್ಯನಾಥಪುರ ನಿವಾಸಿ ನವವಿವಾಹಿತ ಮಧು(35) ಮೃತರು ಎಂದು ಗುರುತಿಸಲಾಗಿದೆ.

ನಿನ್ಮೆ ಮತದಾನ ಮಾಡಿ ಪತ್ನಿಯನ್ನು ತವರು ಮನೆಗೆ ಬಿಟ್ಟು ಬರಲು ಹೋಗಿದ್ದ ಮಧು, ಸಣ್ಣದಾಗಿ ಸುರಿಯುತ್ತಿದ್ದ ಮಳೆಯ ನಡುವೆ ತಮ್ಮ ಮನೆಗೆ ವಾಪಾಸ್ಸು ಬರುತ್ತಿದ್ದ.
ಮದ್ದೂರು ತಾಲೂಕಿನ ಹರಳಹಳ್ಳಿ ಸರ್ಕಲ್ ಬಳಿ ಬೈಕ್‌ನಕಲ್ಲಿ ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಮಳೆ ಜೋರಾದ ಹಿನ್ನಲೆ ಬೈಕ್ ನ್ನು ಹರಳಹಳ್ಳಿ ಸರ್ಕಲ್ ಬಳಿ ಮರದಡಿಯಲ್ಲಿ ನಿಲ್ಲಿಸಿ ನಿಂತುಕೊಂಡಿದ್ದನು. ಹೆಲ್ಮೆಟ್ ಧರಿಸಿ, ಪೋನ್ ನಲ್ಲಿ ಹೆಂಡತಿಯೊಂದಿಗೆ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಮಧು ಮೃತಪಟ್ಟಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಇನ್ನು ಮೂರು ದಿನ ಸಾಧಾರಣ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೋಖಾ ಚಂಡಮಾರುತ ರಾಜ್ಯಕ್ಕೆ ಎಫೆಕ್ಟ್ ಇಲ್ಲ. ಆದರೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ದಕ್ಣಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿನ್ನೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ‌.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com