ಸಂತೋಷ್ ರಾವ್ ತಂದೆಗೆ ಕ್ಷೌರ ಮಾಡಿಸಿ ಪಾದ ಪೂಜೆ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ

ಧರ್ಮಸ್ಥಳ;ಸೌಜನ್ಯ ಕೊಲೆ ಪ್ರಕರಣದಲ್ಲಿ ನಿರ್ದೋಷಿ ಎಂದು ಮಹತ್ವದ ತೀರ್ಪು ನೀಡಿದ ಸಂತೋಷ್ ರಾವ್ ಅವರ ಬೈಲೂರಿನ ಮನೆಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ ನೀಡಿದ್ದಾರೆ.

ಸಂತೋಷ್ ರಾವ್ ಅವರ ತಂದೆ ಶಿಕ್ಷಕ ಸುಧಾಕರ ರಾವ್ ಅವರಿಗೆ ಕ್ಷೌರ ಮಾಡಿಸಿ, ಸ್ನಾನ ಮಾಡಿಸಿ, ಹೊಸ ದೋತಿ ತೊಡಿಸಿ, ಪಾದಪೂಜೆ ಮಾಡುವ ಮೂಲಕ ಗುರುವಂದನೆ ಸಲ್ಲಿಕೆ ಮಾಡಿದ್ದಾರೆ.

ಸಂತೋಷ್ ರಾವ್ ಅವರ ಪಾಳು ಬಿದ್ದ ಸ್ಥಿತಿಯಲ್ಲಿದ್ದ ಅವರ ಮನೆಯ ದುರಸ್ಥಿ ಕಾರ್ಯ ಮಾಡಲು ಪ್ರಾರಂಭಿಸಿದ್ದಾರೆ. ಮನೆಗೆ ಬಣ್ಣ ಬಳಿಯುವ ಕಾರ್ಯ ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಮೈಸೂರು ಒಡನಾಡಿ ಸಂಸ್ಥೆಯ ಮುಖ್ಯಸ್ಥರು, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್