ಎರಡು ದಿನಗಳ ಹಿಂದೆಯಷ್ಟೇ ಬಂಧಿತ ವ್ಯಕ್ತಿ ಜೈಲಿನಲ್ಲಿ ಸಾವು; ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ ಕುಟುಂಬ
ಉತ್ತರಪ್ರದೇಶ;ಮೈನಪುರಿಯ ಜಿಲ್ಲಾ ಕಾರಾಗೃಹದಲ್ಲಿ ಕೈದಿಯೋರ್ವ ಸಂಶಯಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಮೈನಪುರಿ ಕೋತ್ವಾಲಿ ಪ್ರದೇಶದ ನಿವಾಸಿ
ದಲಿತ ಸಮುದಾಯಕ್ಕೆ ಸೇರಿದ ಭುರೆ ಎಂದು ಹೇಳಲಾಗಿದೆ.ಭುರೆ ಬಂಧನಕ್ಕೆ ನ್ಯಾಯಾಲಯವು ವಾರಂಟ್ ಹೊರಡಿಸಿದ ಬಳಿಕ ಎರಡು ದಿನಗಳ ಹಿಂದೆ ಆತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಜೈಲಿನಲ್ಲಿ ಭುರೆ ಆರೋಗ್ಯ ಹದಗೆಟ್ಟಿತ್ತು ಮತ್ತು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಆತನನ್ನು ಥಳಿಸಿ ಕೊಂದಿದ್ದಾರೆ ಎಂದು ಮೃತನ ಕುಟುಂಬವು ಆರೋಪಿಸಿದೆ.
ಭುರೆಯ ಸೋದರನೋರ್ವ ಕೂಡ ಇದೇ ರೀತಿಯಲ್ಲಿ ಮೃತಪಟ್ಟಿದ್ದ.ಹೀಗಾಗಿ ವೈದ್ಯರ ಸಮಿತಿಯು ಮರಣೋತ್ತರ ಪರೀಕ್ಷೆ ನಡೆಸಬೇಕು ಮತ್ತು ಆತನ ಕುಟುಂಬಕ್ಕೆ 20 ಲ.ರೂ.ಗಳ ಪರಿಹಾರವನ್ನು ನೀಡಬೇಕು ಎಂದು ಮೈನಪುರಿಯ ಮಾಜಿ ಶಾಸಕ ರಾಜು ಯಾದವ್ ಆಗ್ರಹಿಸಿದ್ದಾರೆ.
54 ವರ್ಷದ ದಲಿತ ವ್ಯಕ್ತಿ ಭೂರೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಮೈನ್‌ಪುರಿ ಪೊಲೀಸ್ ಠಾಣೆಯ ಹೊರಗೆ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಸಂತ್ರಸ್ತೆಯ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಪರಿಚಯಸ್ಥರನ್ನು ಒಳಗೊಂಡ ಪ್ರತಿಭಟನಾಕಾರರು, ಭೂರೆ ದೈಹಿಕ ಚಿತ್ರಹಿಂಸೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದರು, ಆದರೆ ಅವರು ನೈಸರ್ಗಿಕ ಕಾರಣಗಳಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರತಿಭಟನಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.