ಮಲಯಾಳಂ ನಟಿ ಹೃದಯಾಘಾತದಿಂದ ಮೃತ್ಯು; 8 ತಿಂಗಳ ಗರ್ಭಿಣಿಯಾಗಿದ್ದ ನಟಿಯ ದುರಂತ ಸಾವು

ಮಲಯಾಳಂ ಕಿರುತೆರೆಯ ಖ್ಯಾತ ನಟಿ ಡಾ.ಪ್ರಿಯಾ ಅವರು ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾರೆ.

ಡಾ.ಪ್ರಿಯಾ(35) ಅವರು 8 ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ಹೃದಯಸ್ತಂಭನ ಉಂಟಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಟಿ ಡಾ.ಪ್ರಿಯಾ ಅವರು ತುಂಬು ಗರ್ಭಿಣಿಯಾದ ಕಾರಣ ನಿತ್ಯದ ಚೆಕ್‌ಅಪ್‌ಗಾಗಿ ಆಸ್ಪತ್ರೆಗೆ ತೆರಳಿದ್ದರು. ಇದೇ ವೇಳೆ ಅವರಿಗೆ ಹೃದಯಸ್ತಂಭನ ಉಂಟಾಗಿದೆ ಎಂದು ತಿಳಿದು ಬಂದಿದೆ.

ಚಿಕಿತ್ಸೆ ಆರಂಭಿಸಿದರೂ ಅವರು ಕೆಲವೇ ನಿಮಿಷಗಳಲ್ಲಿ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ. ಇನ್ನು ನಟಿಯ ಗರ್ಭದಲ್ಲಿದ್ದ ಮಗುವಿನ ಸ್ಥಿತಿಯೂ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್