BIG NEWS ಖ್ಯಾತ ಮಲಯಾಳಂ ನಟ ಮಾಮುಕೋಯ ಸ್ಥಿತಿ ಗಂಭೀರ, ಕಾರ್ಯಕ್ರಮ ಉದ್ಘಾಟನೆಗೆ ಬಂದಿದ್ದ ವೇಳೆ ಖ್ಯಾತ ನಟನಿಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್…

ಕೇರಳ;ಮಲಯಾಳಂ ಚಲನಚಿತ್ರ ನಟ ಮಾಮುಕೋಯ ಅವರು ಕಾಳಿಕಾವುನಲ್ಲಿ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದುಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.

ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿದ್ದ ಮಾಮುಕೋಯ ಅವರು ಕಾರ್ಯಕ್ರಮದ ಉದ್ಘಾಟನೆಗೆ ಕೆಲವೇ ನಿಮಿಷಗಳ ಮೊದಲು ಅನಾರೋಗ್ಯದಿಂದ ಹೊರಬಂದಿದ್ದಾರೆ.

ಸ್ವಯಂಸೇವಕರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ವಂಡೂರಿನ ಆಸ್ಪತ್ರೆಗೆ ಸಾಗಿಸಿದರು. ಮಾಮುಕೋಯ ಅವರಿಗೆ ಹೃದಯಾಘಾತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮಂಗಳವಾರ ಮುಂಜಾನೆ ಅವರನ್ನು ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ‌‌.ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ

ಐಸಿಯುನಲ್ಲಿಯೇ ಮಾಮುಕೋಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಮಾಮುಕೋಯ ಅವರು ಮಲಯಾಳಂ ಚಿತ್ರರಂಗದ ಜನಪ್ರಿಯ ನಟನಾಗಿದ್ದು, ಅವರ ಆರೋಗ್ಯಕ್ಕೆ ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥನೆಯನ್ನು ನಡೆಸುತ್ತಿದ್ದಾರೆ‌.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com