ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ; ಆರೋಪಿ ಅರೆಸ್ಟ್

ಹೈದರಾಬಾದ್;ತೆಲಂಗಾಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಹೇಳಿಕೆ ಕೊಟ್ಟ ಆರೋಪಿಯನ್ನು ಬಂಧಿಸಲಾಗಿದೆ.

ಅಂಬೇಡ್ಕರ್ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ಹಮಾರಾ ಪ್ರಸಾದ್ ಎಂಬಾತ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್‌ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ವಿಡಿಯೋ ಮೂಲಕ ಹೇಳಿದ್ದ.

ಈತನ ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com