ಬೆಂಗಳೂರು;ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡು ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 22ಲಕ್ಷ ಮೌಲ್ಯದ 442 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಬ್ಯಾಂಕಾಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ವೈಮಾನಿಕ ಗುಪ್ತಚರ ದಳ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಣಿಕೆ ಮಾಡುತ್ತಿರುವುದು ತಿಳಿದುಬಂದಿದೆ.
ಬಂಧಿತ ವ್ಯಕ್ತಿ ತನ್ನ ಗುದನಾಳದಲ್ಲಿ ಕ್ಯಾಪ್ಸುಲ್ ಮಾದರಿಯಲ್ಲಿ ಚಿನ್ನವನ್ನು ಬಚ್ಟಿಟ್ಟುಕೊಂಡು ಸಾಗಣೆಗೆ ಯತ್ನಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗೆ ಪರಿಶೀಲಿಸಿದಾಗ ಯಾವುದೇ ಸುಳಿವು ಸಿಕ್ಕಿರಲಿಲ್ಲ.ಆದರೆ, ಆರೋಪಿ ನಡೆಯಿಂದ ಹೆಚ್ಚಿನ ಅನುಮಾನ ಬಂದಿತ್ತು.ವೈದ್ಯರ ಸಹಾಯದಿಂದ ದೇಹ ಸ್ಕ್ಯಾನಿಂಗ್ ನಡೆಸಿದಾಗ ಗುದದ್ವಾರದಲ್ಲಿ 442ಗ್ರಾಂ ಚಿನ್ನದ ಮಾತ್ರೆ ರೂಪದಲ್ಲಿ ಇಟ್ಟುಕೊಂಡಿರುವುದು ಗೊತ್ತಾಗಿದೆ.