ಮುಖ್ಯಮಂತ್ರಿ ಇದ್ದ ವೇದಿಕೆಗೆ ಮಗುವನ್ನು ಎಸೆದ ತಂದೆ, ಹೃದಯವಿದ್ರಾಹಕ ಘಟನೆ
ಮಧ್ಯಪ್ರದೇಶ;ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿದ್ದ ಕಾರ್ಯಕ್ರಮದಲ್ಲಿ ತಂದೆಯೊಬ್ಬ ತಮ್ಮ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವಂತೆ ತನ್ನ ಮಗುವನ್ನು ವೇದಿಕೆಗೆ ಎಸೆದಿರುವ ಘಟನೆ ನಡೆದಿದೆ.
ಘಟನೆಯ ಬಗೆಗಿನ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.
ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಸಾಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ, ಒಬ್ಬ ವ್ಯಕ್ತಿ ಹಠಾತ್ತಾಗಿ ತನ್ನ ಮಗುವನ್ನು ಸಿಎಂ ಇರುವ ವೇದಿಕೆಗೆ ಎಸೆದಿದ್ದಾರೆ.
ಮುಖೇಶ್ ಪಾಟೇಲ್ ಎಂಬ ಕಾರ್ಮಿಕ ತನ್ನ ಮಗುವಿನ ಚಿಕಿತ್ಸೆಗೆ ಸಹಾಯಕ್ಕಾಗಿ ಸಿಎಂ ಅವರ ಗಮನ ಸೆಳೆಯಬೇಕು ಎಂದು ತನ್ನ ಮಗುವನ್ನು ವೇದಿಕೆ ಎಸೆದಿದ್ದಾನೆ ಎಂದು ಹೇಳಲಾಗಿದೆ.
ಸಾರ್ವಜನಿಕರ ಗುಂಪಿನಿಂದ ಮಗುವೊಂದು ವೇದಿಕೆಯತ್ತ ಬರುತ್ತಿರುವುದನ್ನು ಕಂಡು ಭದ್ರತಾ ಸಿಬ್ಬಂದಿ ಮಗುವನ್ನು ಹಿಡಿದು, ತಾಯಿಗೆ ನೀಡಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡು ಸಿಎಂ ತನ್ನ ಅಧಿಕಾರಿಗಳಿಗೆ ತಿಳಿಸಿ ಅವರು ಸಮಸ್ಯೆಯನ್ನು ತಿಳಿದುಕೊಳ್ಳುವಂತೆ ಹೇಳಿದ್ದಾರೆ. ಅಧಿಕಾರಿಗಳು ಆತನನ್ನು ವಿಚಾರಿಸಿದಾಗ ತನ್ನ ಮಗುವಿಗೆ ಹೃದಯದಲ್ಲಿ ರಂಧ್ರವಿದೆ, ಹಾಗಾಗಿ ನಮಗೆ ಮಗುವಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಇದನ್ನು ಸಿಎಂ ಬಳಿ ಅಧಿಕಾರಿಗಳು ವಿವರಿಸಿದ್ದಾರೆ, ತಕ್ಷಣ ಆ ಮಗುವಿನ ಚಿಕಿತ್ಸೆಗೆ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ. ಈ ಬಗ್ಗೆ ಎಲ್ಲ ಹೊಣೆಯನ್ನು ಜಿಲ್ಲಾಧಿಕಾರಿಗಳು ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಮುಖೇಶ್ ಪಟೇಲ್ ಅವರು ತಮ್ಮ ಪತ್ನಿ ನೇಹಾ ಮತ್ತು ಅವರ ಒಂದು ವರ್ಷದ ಮಗನೊಂದಿಗೆ ಸಾಗರದ ಕೆಸ್ಲಿ ತಹಸಿಲ್‌ನ ಸಹಜ್‌ಪುರ ಗ್ರಾಮದಲ್ಲಿ ವಾಸವಾಗಿದ್ದರು.