ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳ ಬರ್ಬರ ಹತ್ಯೆ, ತಂದೆಯಿಂದಲೇ ಕೃತ್ಯ: ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ

ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳ ಬರ್ಬರ ಹತ್ಯೆ, ತಂದೆಯಿಂದಲೇ ಕೃತ್ಯ:ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ

ಮಂಡ್ಯ:ತಂದೆಯೋರ್ವ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಅದರ್ಶ್ (4) ಹಾಗೂ ಅಮೂಲ್ಯ (3) ಕೊಲೆಯಾಗಿರುವ ಮಕ್ಕಳು.ಶ್ರೀಕಾಂತ್ ಎಂಬಾತ ಸುತ್ತಿಗೆಯಿಂದ ಹೊಡೆದು ಮಕ್ಕಳನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಇದಲ್ಲದೆ ಪತ್ನಿ ಲಕ್ಮೀ ಮೇಲೂ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಲಕ್ಷ್ಮೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ.

ಮೂಲತಃ ಕಲಬುರ್ಗಿ ನಿವಾಸಿಯಾಗಿರುವ ಶ್ರೀಕಾಂತ್ ಮರಳಗಾಲದ ಬಳಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ.ಕೃತ್ಯಕ್ಕೆ‌ ಕಾರಣ ತಿಳಿದು ಬಂದಿಲ್ಲ.

ಇಂದು ಬೆಳಗಿನ ಜಾವ ಘಟನೆ ನಡೆದಿದೆ.ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್