ಬೆಳ್ತಂಗಡಿ:ಬಸ್ಸಿನಲ್ಲಿ ಪ್ರಯಾಣಿಸುವಾಗ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ ತಾಜ್ ಬಾವುಂಞಿ ಎಂದು ಗುರುತಿಸಲಾಗಿದೆ.
ತಾಜ್ ಬಾವುಂಞಿ ಅವರು ಕೆಲಸಕ್ಕೆಂದು ಬೆಳಗ್ಗೆ ಮಂಗಳೂರಿಗೆ ತೆರಳಿ ಸಂಜೆ ಮನೆಗೆ ಬಸ್ಸಿನಲ್ಲಿ ಬರುತಿದ್ದ ವೇಳೆ ಮಂಗಳೂರಿನ ಪಡೀಲ್ ಬಳಿ ಬಸ್ಸಿನಲ್ಲಿ ಕುಸಿದು ಬಿದಿದ್ದಾರೆ.
ಕೂಡಲೇ ಸಮೀಪದ ಆಸ್ಪತ್ರೆಯ ಬಳಿ ಬಸ್ ನಿಲ್ಲಿಸಿ ಅವರನ್ನು ಕಂಡೆಕ್ಟರ್ ಸೇರಿದಂತೆ ಬಸ್ಸಲ್ಲಿದ್ದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಅದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ. ಬಾವುಂಞ ಇವರು ಇಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.