ಮಂಗಳೂರು:ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು

-ಮಹಮ್ಮದ್ ನಶತ್(21) ಮೃತ ವಿದ್ಯಾರ್ಥಿ.

ಮಂಗಳೂರು:ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಇಂದು ನಡೆದಿದೆ.

ಮೃತ ಯುವಕನನ್ನು ವಿದ್ಯಾರ್ಥಿ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ.

ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು
ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಟಾಪ್ ನ್ಯೂಸ್