ಮಂಗಳೂರು; ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು- ಕುಟುಂಬಸ್ಥರ ಆರೋಪ, ಪ್ರತಿಭಟನೆ

ಮಂಗಳೂರು;ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ.
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ‌ ಮಹಿಳೆ.

ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು.ಅಂದು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು.
ಸಾವಿಗೆ ವೈದ್ಯರ ನಿರ್ಲಕ್ಷ್ಯ ಹಾಗೂ ಬೇರೆ ವೈದ್ಯರಿಂದ ಡೆಲಿವರಿ ಮಾಡಿಸಿದ್ದು ಕಾರಣ ಎಂದು ಆರೋಪಿಸಿ ಶಿಲ್ಪಾ ಪತಿ ಪ್ರದೀಪ್ ಆಚಾರ್ಯ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆಸ್ಪತ್ರೆಯ ವೈದ್ಯರು ಹಾಗೂ ಆಡಳಿತ ವರ್ಗ ಹಾಗೂ ಸಿಬ್ಬಂದಿಗಳ ನಿರ್ಲಕ್ಷತನವೇ ಸಾವಿಗೆ ಕಾರಣ ಎಂದು ದೂರು ನೀಡಿದ್ದಾರೆ.ಸದ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮರಣೋತ್ತರ‌ ಪರೀಕ್ಷೆಗಾಗಿ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮುಂದಾಗಿದ್ದು, ಈ ವೇಳೆ ಎ.ಜೆ. ಆಸ್ಪತ್ರೆ ಬಳಿ ಮೃತದೇಹ ತಡೆದು ಸಂಬಂಧಿಕರು, ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯಿಂದ ನೊಂದ ಮಹಿಳೆಯ ಕುಟುಂಬಸ್ಥರು ಮಳೆಯನ್ನು ಲೆಕ್ಕಿಸದೆ ನ್ಯಾಯಕ್ಕಾಗಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಆಡಳಿತ ಮಂಡಳಿ ಬರುವಂತೆ ಮಳೆಯ ಮಧ್ಯೆ ಪ್ರತಿಭಟನೆ ನಡೆಸಿದ್ದಾರೆ.ಈ ವೇಳೆ ಅಂಬ್ಯುಲೆನ್ಸ್ ತಡೆದಿದ್ದಾರೆ.ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟವಾಗಿದೆ.ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್