ಮಂಗಳೂರು; ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ, 7 ಮಂದಿಯ ಬಂಧನ

ಮಂಗಳೂರು: ಖಾಸಗಿ ಕಾಲೇಜೊಂದರ ಬಳಿ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆಗೈದ ಆರೋಪದ ಮೇರೆಗೆ 7 ಮಂದಿಯನ್ನು ಬಂದರು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಆಲಡ್ಕದ ಇಬ್ರಾಹೀಂ ತಾಬೀಶ್ (19), ಗೂಡಿನ ಬಳಿಯ ಅಬ್ದುಲ್ಲಾ ಹನ್ನಾನ್ (19), ಸಜಿಪ ಮುನ್ನೂರು ಗ್ರಾಮದ ಶಕೀಫ್ (19), ಬಂಟ್ವಾಳದ ಶಾಹೀಕ್ (19), ನಂತೂರಿನ ತನ್ವೀರ್ (20), ಫೈಸಲ್ ನಗರದ ಅಬ್ದುಲ್ ರಶೀದ್ (19), ಗೂಡಿನ ಬಳಿಯ ಮನ್ಸೂರ್ (37) ಬಂಧಿತರು ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳಾದ ಶಾಮೀರ್ ಮತ್ತು ಇಬ್ರಾಹೀಂ ಫಾಹೀಮ್ ಎಂಬವರನ್ನು ಆ.23ರಂದು ಈ ಆರೋಪಿಗಳು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಈ ಬಗ್ಗೆ ಇಬ್ರಾಹೀಂ ಫಾಹೀಮ್ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು