ಮಂಗಳೂರು; ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ; ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ

ಮಂಗಳೂರು: ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗಣೇಶ್ ಅತ್ತಾವರ, ಜೈ ಪ್ರಶಾಂತ್, ಬಾಲಚಂದ್ರ, ಅಕ್ಷಯ್, ಚಿರಾಗ್, ಮಿಥುನ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳದಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ಪೊಲೀಸರು ಇನ್ನೂ ಯಾವುದೇ ದೂರನ್ನು ಸ್ವೀಕರಿಸಿಲ್ಲ ಮತ್ತು ತೊಂದರೆಯನ್ನು ಸೃಷ್ಟಿಸುವ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕಮಿಷನರ್ ಹೇಳಿದರು.

ಬಜರಂಗದಳದ ಕೆಲವು ಕಾರ್ಯಕರ್ತರು ಭಾನುವಾರ ಮರೋಳಿಯಲ್ಲಿ ಆಯೋಜಿಸಿದ್ದ ರಂಗ್ ದೇ ಬರ್ಸಾ ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬ್ಯಾನರ್ ನ್ನು ಧ್ವಂಸಗೊಳಿಸಿದ್ದಾರೆ.

ಯುವಕರು ಮತ್ತು ಯುವತಿಯರು ಹೋಳಿ ಪಾರ್ಟಿಯನ್ನು ಆನಂದಿಸುತ್ತಿದ್ದರು. ಒಬ್ಬರ ಮೇಲೆ ಒಬ್ಬರು ಬಣ್ಣ ಎರಚುತ್ತಿದ್ದರು ಎಂದು ದಾಳಿ ಮಾಡಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್