ಮಂಗಳೂರು;ಬ್ಯಾನರ್ ತೆರವುಗೊಳಿಸುತ್ತಿದ್ದಾಗ ಪಾಲಿಕೆ ಅಧಿಕಾರಿಗಳಿಗೆ ಯುವಕರ ತಂಡವೊಂದು ನಿಂದಿಸಿದ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಪಾಲಿಕೆ ಕಂದಾಯ ನಿರೀಕ್ಷಕ ರವೀಂದ್ರ ಎಂಬವರು ಜಿಲ್ಲಾಧಿಕಾರಿಯ ಸೂಚನೆಯಂತೆ ಮಾ.24ರಂದು ರಾತ್ರಿ ವೇಳೆ ಅತ್ತಾವರ ಚಕ್ರಪಾಣಿ ದೇವಸ್ಥಾನದ ಹತ್ತಿರವಿರುವ ಅನಧಿಕೃತ ಬ್ಯಾನರ್ ತೆರವುಗೊಳಿಸುತ್ತಿದ್ದಾಗ ಅಲ್ಲಿಗೆ ಬಂದ 4 ಮಂದಿಯ ತಂಡ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ರವೀಂದ್ರ ಅವರು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪಾಂಡೇಶ್ವರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಳ್ಳಲು ಮುಂದಾಗಿದ್ದಾರೆ.