ಮಂಗಳೂರು:ನಗರದಾದ್ಯಂತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಾಪುರ ಸುರತ್ಕಲ್ ನಿವಾಸಿ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆ.ಸಿ.ರೋಡ್ ನಿವಾಸಿ ನಿಶಾದ್ (31) ಮತ್ತು ಕಣ್ಣೂರು ನಿವಾಸಿ ಮಹಮ್ಮದ್ ರಝೀನ್ (24)ಬಂಧಿತರು.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿರೂರು ಎಂಬಲ್ಲಿ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುವಾಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 180 ಗ್ರಾಂ ತೂಕದ 9 ಲಕ್ಷ ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರುಗಳು, 4 ಮೊಬೈಲ್ ಫೋನ್ ಗಳು, ಪಿಸ್ತೂಲ್-1, ಸಜೀವ ಗುಂಡು-1, ಡ್ರಾಗನ್ ಚೂರಿಗಳು-2, ಡಿಜಿಟಲ್ ತೂಕ ಮಾಪನ ಮತ್ತು ರೂ. 22,050 ನಗದು ವಶಪಡಿಸಿಕೊಳ್ಳಲಾಗಿದೆ.
ಅರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.