ಮಂಗಳೂರು; ಹೋಟೆಲ್ ಸ್ವಿಮ್ಮಿಂಗ್ ಪೂಲ್‍ನಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ

ಮಂಗಳೂರು; ಕೇರಳ ಮೂಲದ ಬ್ಯಾಂಕ್ ಅಧಿಕಾರಿ ನಗರದ ಮೋತಿ ಮಹಲ್ ಹೋಟೆಲ್ ಸ್ವಿಮ್ಮಿಂಗ್ ಪೂಲ್‍ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೇರಳದ ತಿರುವನಂತಪುರಂ ನಿವಾಸಿ ಯೂನಿಯನ್ ಬ್ಯಾಂಕ್‍ನ ಅಧಿಕಾರಿ ಗೋಪು ಆರ್ ನಾಯರ್ ಮೃತದೇಹ ಪತ್ತೆಯಾಗಿದೆ‌.

ನಿನ್ನೆ ಮಂಗಳೂರಿಗೆ ಬಂದಿದ್ದ ಅವರು ಮೋತಿ ಮಹಲ್ ಹೊಟೇಲ್‍ನಲ್ಲಿ ಉಳಿದು ಕೊಂಡಿದ್ದರು. ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಬಂದು ಸ್ವಿಮ್ಮಿಂಗ್ ಪೂಲ್ ಬಳಿ ವಿಹರಿಸಿದ್ದರು.

ಆದರೆ ರಾತ್ರಿ ವೇಳೆ 11 ಅಡಿ ಆಳದಲ್ಲಿದ್ದ ನಾಯರ್ ಮೃತದೇಹವನ್ನು ಮುಳುಗು ತಜ್ಞರು ಹೊರತೆಗೆದಿದ್ದಾರೆ. ಈಜುತ್ತಿರುವಾಗ ಮೇಲೆ ಬರಲು ಸಾಧ್ಯವಾಗದೆ ಮುಳುಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್