ಮಂಗಳೂರು; ಕುಟುಂಬಸ್ಥರು ಸಂಪರ್ಕಕ್ಕೆ ಸಿಗದ ಹಿನ್ನೆಲೆ; ಮಾಲಕನಿಂದ ಕೊಲೆಯಾದ ಯುವಕನ ಅಂತ್ಯಸಂಸ್ಕಾರ ನೆರವೇರಿಸಿದ ಸ್ಥಳೀಯರು

ಮಂಗಳೂರು:ಕೊಲೆಯಾದ ಯುವಕನ ಕುಟುಂಬಸ್ಥರು ಯಾರೆಂದು ತಿಳಿಯದ ಹಿನ್ನೆಲೆ ಸಾರ್ವಜನಿಕರು‌ ಮತ್ತು ಪೊಲೀಸರು ಸೇರಿ ಯುವಕನ ಅಂತ್ಯಸಂಸ್ಕಾರವನ್ನು ನಡೆಸಿದ್ದಾರೆ.

ಕೊಲೆಯಾದ ಗಜ್ಞಾನ್ ಜಗುನ ಅಂತ್ಯಸಂಸ್ಕಾರವನ್ನು ಇಂದು ನಗರದ ನಂದಿಗುಡ್ಡೆಯ ಸ್ಮಶಾನದಲ್ಲಿ ಸ್ಥಳೀಯರು ಪಾಂಡೇಶ್ವರ ಪೊಲೀಸರ ಸಮ್ಮುಖದಲ್ಲಿ ನೆರವೇರಿಸಿದರು.

ಉತ್ತರ ಭಾರತ ಮೂಲದ ಕಾರ್ಮಿಕ ಗಜ್ಞಾನ್ ಕುಟುಂಬಸ್ಥರು ಯಾರೆಂದು ಪತ್ತೆಯಾಗದಿರುವ ಕಾರಣ ಮಹಮ್ಮದ್ ಅಝರ್ ನೇತೃತ್ವದಲ್ಲಿ ನಡೆದ ಇಂದು ಅಂತ್ಯಸಂಸ್ಕಾರ ಕಾರ್ಯ ನೆರವೇರಿಸಲಾಗಿದೆ.

ಉತ್ತರ ಭಾರತ ಮೂಲದ ಕಾರ್ಮಿಕ ಗಜ್ಞಾನ್ ಮುಳಿಹಿತ್ಲು ಜಂಕ್ಷನ್‌ನಲ್ಲಿ ಇರುವ ತೌಸಿಫ್ ಹುಸೈನ್‌ ನ ಎಂಬವನ ಜನರಲ್‌ ಸ್ಟೋರ್‌ನಲ್ಲಿ ಕೆಲಸಕ್ಕಿದ್ದ.ಜು.8ರ ಶನಿವಾರ ಬೆಳಗ್ಗೆ ಕ್ಷುಲ್ಲಕ ಕಾರಣಕ್ಕೆ ಗಜ್ಞಾನ್‌ನನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದ.ಬಳಿಕ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾನೆಂದು ಸುಳ್ಳು ಹೇಳಿದ್ದ.

ಈ ಕುರಿತು ತನಿಖೆ ನಡೆಸಿದ ಪೊಲೀಸರು ಇದೊಂದು ಕೊಲೆ ಪ್ರಕರಣ ಎನ್ನುವುದನ್ನು ಪತ್ತೆಹಚ್ಚಿದ್ದರು.

ಆರೋಪಿ ತೌಸಿಫ್ ಹುಸೈನ್‌ನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದರು.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ