ಬೆಂಗಳೂರು;ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣದ ಹಾದಿಯಲ್ಲಿದೆ.ಕಾಂಗ್ರೆಸ್ ಬಹುಮತದತ್ತ ಸಾಗಿದೆ.ಮಂಗಳೂರು ಉತ್ತರದಲ್ಲಿ ಇನಾಯತ್ ಅಲಿಗೆ ಸೋಲಾಗಿದ್ದು, ಭರತ್ ಶೆಟ್ಟಿ ಗೆಲುವನ್ನು ಕಂಡುಕೊಂಡಿದ್ದಾರೆ.
131 ಕ್ಷೇತ್ರಗಳಲ್ಲಿ ಮುನ್ನಡೆ ಮೂಲಕ ಕಾಂಗ್ರೆಸ್ ಬಹುಮತದತ್ತ ಸಾಗಿದೆ.ಅದೇ ರೀತಿ ಬಿಜೆಪಿ 66 ಕ್ಷೇತ್ರಗಳಲ್ಲಿ, ಜೆಡಿಎಸ್ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸೋಲಾಗಿದೆ.ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಾಗಿದೆ.
ಗಂಗಾವತಿಯಲ್ಲಿ ಜನಾರ್ಧನ ರೆಡ್ಡಿ ಹೊಸ ಪಕ್ಷ ಕಟ್ಟಿ ಗೆಲುವನ್ನು ಸಾಧಿಸಿದ್ದಾರೆ.ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾಗೆ ಗೆಲುವಾಗಿದೆ.ರಕ್ಷಿತ್ ಶಿವರಾಂ ಸೋಲನ್ನು ಕಂಡಿಸಿದ್ದಾರೆ.ಕನಕಪುರದಲ್ಲಿ ಡಿಕೆ ಶಿವಕುಮಾರ್ 1 ಲಕ್ಷ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಉಳ್ಳಾಲದಲ್ಲಿ ಯಟಿ ಖಾದರ್ ಗೆ ಗೆಲುವು ಎಸ್ ಡಿಪಿಐನ ರಿಯಾಝ್ ಫರಂಗಿಪೇಟೆ ಸೋಲನ್ನು ಕಂಡಿದ್ದಾರೆ.
ಮೊಳಕಾಲ್ಮೂರಿನಲ್ಲಿ ಬಿಜೆಪಿಯ ಅಭ್ಯರ್ಥಿ ಹಾಲಿ ಸಚಿವ ಬಿ. ಶ್ರೀ ರಾಮುಲು ತೀವ್ರ ಮುಖಭಂಗವನ್ನು ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ ವಿರುದ್ಧ 26 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.
ದಾವಣಗೆರೆ ಉತ್ತರ ಕ್ಷೇತ್ರ ಕಾಂಗ್ರೆಸ್ ಗೆಲುವು, ಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆ ಭಾರೀ ಹಿನ್ನೆಡೆಯಾಗಿದೆ.ಶಿವಮೊಗ್ಗ ನಗರದಲ್ಲಿ ಆಯನೂರ್ ಮಂಜುನಾಥ್ ಗೆ ಸೋಲಾಗಿದೆ.ಬಿಜೆಪಿಯ ಚನ್ನಬಸಪ್ಪಗೆ ಸೋಲಾಗಿದೆ.