BREAKING ಮಂಗಳೂರು; ಜ್ಯುವೆಲ್ಲರಿ ಅಂಗಡಿಯಲ್ಲಿ ವ್ಯಕ್ತಿಯೋರ್ವನಿಗೆ ಚೂರಿಯಿಂದ ಇರಿದು ಕೊಲೆ

ಮಂಗಳೂರು:ವ್ಯಕ್ತಿಯೋರ್ವನಿಗೆ ಅಂಗಡಿಗೆ ನುಗ್ಗಿ ಚೂರಿಯಿಂದ ಇರಿದ ಘಟನೆ ನಗರದ ಹಂಪನಕಟ್ಟೆಯ ಬಳಿ ನಡೆದಿದೆ.

ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ರಾಘವ ಆಚಾರಿ(50) ಮೇಲೆ ಚೂರಿಯಿಂದ ಇರಿಯಲಾಗಿದೆ.

ಚೂರಿ ಇರಿತದಿಂದ ಗಾಯಗೊಂಡಿರುವ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ವಿಚಾರ ಇದೆಯಾ ಎನ್ನುವುದು ತಿಳಿದು ಬಂದಿಲ್ಲ.

ಇನ್ನು ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದೆ ಎನ್ನಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್