ಮಂಗಳೂರು;ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ.
ಜಾರ್ಖಂಡ್ ಮೂಲದವರಾದ ಫಿರೋಝ್ ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ನಿನ್ನೆ ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಘಟನೆಯಿಂದಾಗಿ ಇದೀಗ ಪೋಷಕರ ರೋಧನ ಮುಗಿಲು ಮುಟ್ಟಿದೆ.