ಮಂಗಳೂರು; ಗಾಂಜಾ ದಂಧೆ ಪ್ರಕರಣ, ಮತ್ತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳ ಬಂಧನ, ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ

ಮಂಗಳೂರು:ಮಂಗಳೂರಿನಲ್ಲಿ ಗಾಂಜಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ರಾಘವ ದತ್ತ (28) ಮತ್ತು ಬೆಂಗಳೂರು ಹಲಸೂರು ಜೋಡುಪಾಳ್ಯದ ಡಾ.ಬಾಲಾಜಿ (29) ಎಂದು ಗುರುತಿಸಲಾಗಿದೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ಇವರಲ್ಲಿ ನಾಲ್ವರು ಯುವತಿಯರು ಇದ್ದಾರೆ.

ಇನ್ನು ಕಳೆದ 10 ದಿನಗಳಲ್ಲಿ ಹಲವಾರು ಮಾದಕ ವಸ್ತು ಕಳ್ಳಸಾಗಣೆ ಜಾಲ ಪ್ರಕರಣಗಳಿಗೆ ಸಂಬಂಧಿಸಿದಂತೆ 100 ಕೆಜಿಗೂ ಹೆಚ್ಚು ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್