ಮಂಗಳೂರು; ಕಾರ್ಯಕ್ರಮವೊಂದಕ್ಕೆ ನುಗ್ಗಿ ಸಂಘಪರಿವಾರದ ಕಾರ್ಯಕರ್ತರಿಂದ ದಾಂಧಲೆ ಆರೋಪ

ಮಂಗಳೂರು;ಹೋಳಿ ಆಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಸಂಘಪರಿವಾರದ ಕಾರ್ಯಕರ್ತರು ತೆರಳಿ ದಾಂಧಲೆ ನಡೆಸಿರುವ ಆರೋಪ ಮರೋಳಿ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಹೋಳಿ ಆಚರಣೆಯ ಭಾಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಡಿಜೆ ಹಾಕಿ ಯುವಕ ಯುವತಿಯರು ಪರಸ್ಪರ ಬಣ್ಣ ಎರಚಿ ಆಚರಿಸುತ್ತಿದ್ದರು.ಇದನ್ನು ತಿಳಿದು ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಘಪರಿವಾದ ಕಾರ್ಯಕರ್ತರು ಹೋಳಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ ಎನ್ನಲಾಗಿದೆ.ಸ್ಥಳದಲ್ಲಿ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನೀಡಿರುವ ಕಮಿಷನರ್ ಕುಲದೀಪ್ ಕುಮಾರ್ 6 ಮಂದಿ ಯುವಕರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಇದೆ.ಈ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್