ಮಂಗಳೂರು: ಅನೈತಿಕ ಪೊಲೀಸ್ ಗಿರಿ; ಇಬ್ಬರು ವಶಕ್ಕೆ

ಮಂಗಳೂರು: ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜೊತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದಾಗ ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ.

ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ನ.27ರಂದು ಸಂಜೆ 8 ಗಂಟೆ ವೇಳೆಯಲ್ಲಿ ಜತೆಯಾಗಿ ಬೈಕ್ ನಲ್ಲಿ ತೆರಳಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಗ್ರೆಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ನೋಡಿದ
ಇಬ್ಬರು ಜೋಡಿಯನ್ನು ಹಿಂಬಾಲಿಸಿ ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ.

ಬಳಿಕ ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನು ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್