ಮಂಗಳೂರು;ನಳಿನ್ ಕುಮಾರ್ ಕಟೀಲ್ ಗೆ ಕಪ್ಪು ಬಾವುಟ ಪ್ರದರ್ಶನ

ಮಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದ.ಕ ಜಿಲ್ಲಾ ಯುವ ಜೆಡಿಎಸ್ ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆ ಹಾಕಿದೆ.

ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಲಾಗಿದ್ದು,
ಜಿಲ್ಲಾ ಸಂಘಟನಾ ಉಸ್ತುವಾರಿಯಾದ ರತೀಶ್ ಕರ್ಕೇರ, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಸೇರಿ‌ ಹಲವರು ಈ ವೇಳೆ ಇದ್ದರು.

ದೇವೆಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ಅವರ ವರ್ತನೆ ಖಂಡನೀಯ. ದೇಶದ ಪ್ರಧಾನಿಯಾಗಿ ಅವರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು ಆದರೆ ದೇಶದ ಜನರು ಮರೆತಿಲ್ಲ. ನಳಿನ್ ಗೆ ಅವರ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com