ಮಂಗಳೂರು;ತಲೆ ಮರೆಸಿಕೊಂಡಿದ್ದ ಆರೋಪಿಗೆ ದುಬೈನಿಂದ ಬಂದಿಳಿದಾಗ ಬಂಧಿಸಿದ ಪೊಲೀಸರು

-ನವಾಝ್ ಶರೀಫ್ ಬಂಧಿತ

ಮಂಗಳೂರು:ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನ ಅಡ್ಯಾರ್ ಬಳಿಯ ನಿವಾಸಿ ನವಾಝ್ ಶರೀಫ್ ಬಂಧಿತ.

ನವಾಖ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ನೋಂದಣಿ ಸಂಖ್ಯೆ 46/2020 ಕಲಂ 143, 147, 323, 504, 427, 307 ಆರ್/ಡಬ್ಲ್ಯು 149 ಐಪಿಸಿ ಅಡಿಯಲ್ಲಿ ಪ್ರಕರಣಗಳು ದಾಖಲಾಗಿತ್ತು ಎಂದು ವರದಿಯಾಗಿದೆ.

ಈತ ಕಳೆದ ಒಂದು ವರ್ಷದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ಬಂಧನಕ್ಕೆ ನ್ಯಾಯಾಲಯ ಹಲವು ಬಾರಿ ವಾರಂಟ್‌ಗಳನ್ನು ಬಿಡುಗಡೆ ಮಾಡಿತ್ತು‌ ಎಂದು ವರದಿಯಾಗಿದೆ.

ಆರೋಪಿ ದುಬೈನಿಂದ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿಮಾನ ನಿಲ್ದಾಣದಿಂದ ಕಸ್ಟಡಿಗೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com