ಮಂಗಳೂರು; ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಕಾರು ಚಾಲಕ ಪರಾರಿ; ಕೇಸ್ ದಾಖಲು

ಮಂಗಳೂರು:ಪೆಟ್ರೋಲ್ ಬಂಕ್ ನಲ್ಲಿ ವ್ಯಕ್ತಿಯೋರ್ವ ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 20ರಂದು ರಾತ್ರಿ 11.19ಕ್ಕೆ ಕಾವೂರಿನ ಪೆಟ್ರೋಲ್ ಪಂಪ್‌ನಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತ 4,100.60 ರೂ. ಬಿಲ್ ಪಾವತಿಸದೆ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ ಎಂದು ದೂರು ದಾಖಲಾಗಿದೆ.

ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರನ್ನು ಬೆನ್ನಟ್ಟಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ