ಮಂಗಳೂರು:ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ
ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸದೆ ವರ್ಗಾವಣೆ ಮಾಡಿದೆ. ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು.
ಇವರು ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.