ಸಾಮಾಜಿಕ ಜಾಲತಾಣಗಳ ಮೇಲೆ ಮಂಗಳೂರು ಪೊಲೀಸರ ಕಣ್ಣು; ಈವರೆಗೆ 21 ಪ್ರಕರಣಗಳು ದಾಖಲು

ಮಂಗಳೂರು;ಸಾಮಾಜಿಕ ಜಾಲತಾಣಗಳ ಮೇಲೆ ಮಂಗಳೂರು ನಗರ ಪೊಲೀಸರು ಕಣ್ಣಿಟ್ಟಿದ್ದು, ಈಗಾಗಲೇ 21 ಪ್ರಕರಣಗಳು ದಾಖಲಾಗಿದೆ.

ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್‌ಬುಕ್, ಇನ್ಸಾ ಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್‌ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಚಾರಕ್ಕೆ ಸಂಬಂಧಿಸಿ 21 ಪ್ರಕರಣ ಈಗಾಗಲೇ ದಾಖಲಾಗಿದ್ದು, ತನಿಖೆ ಪ್ರಗತಿಯ ಹಂತದಲ್ಲಿದೆ ಎಂದು ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ‌

ನಗರದ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್‌ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸುತ್ತಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಇದೇ ರೀತಿಯಲ್ಲಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ
ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ