ಮಂಗಳೂರು; ಬಾಲಕಿ ಮೇಲೆ ಲೈಂಗಿಕ‌ ದೌರ್ಜನ್ಯ; ಆರೋಪಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು:ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಆರೋಪಿ ರಂಜಿತ್‌ ಕುಮಾರ್‌ನಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 8,000 ರೂ. ದಂಡ ವಿಧಿಸಿದೆ.

ರಂಜಿತ್‌ ಕುಮಾರ್‌ ಎಂಬಾತ ಮೂಡುಬಿದಿರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು ಈತ ತನ್ನದೇ ಪತ್ನಿಯ ಮಗಳ( ಪತ್ನಿಗೆ ಎರಡನೇ ವಿವಾಹ) ಮೇಲೆ 2019ರ ಮೇ 8ರಂದು ಲೈಂಗಿಕ ದೌರ್ಜನ್ಯ ಎಸಗಿದ್ದ.
ಈ ಬಗ್ಗೆ ಪ್ರಕರಣ ದಾಖಲಾದ ಬಳಿಕ ತನಿಖೆ ನಡೆಸಿದ್ದ ಮೂಡುಬಿದಿರೆ ಪೊಲೀಸ್‌ ಠಾಣೆ ಉಪನಿರೀಕ್ಷಕಿ ಸಾವಿತ್ರಿ ನಾಯಕ್‌ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಆ. 25ರಂದು ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಈ ಬಗ್ಗೆ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದಾರೆ.ಟಾಪ್ ನ್ಯೂಸ್