ಮಂಗಳೂರು; ಹಲ್ಲೆ ಪ್ರಕರಣ, ಕೇಸ್ ದಾಖಲು

ಮಂಗಳೂರು; ನಾಲ್ವರು ಯುವಕರು ಸೇರಿ ಮಂಗಳಮುಖಿಗೆ ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಮಂಗಳಮುಖಿ ಶಾಂತಿ ಎಂಬವರ ಮೇಲೆ ಹಲ್ಲೆ ನಡೆದಿದೆ.ಶಾಂತಿ ಎ.30ರಂದು ರಾತ್ರಿ ಕುಂಟಿಕಾನ ಬಳಿ ಇದ್ದಾಗ ಅಲ್ಲಿಗೆ ಬಂದಿದ್ದ ನಾಲ್ವರು ಯುವಕರು ಅವಾಚ್ಯವಾಗಿ ಬೈದು ಕಲ್ಲು, ಪ್ಲಾಸ್ಟಿಕ್‌ ಪೈಪ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಈ ವೇಳೆ ಕಾರು ಬರುತ್ತಿರುವುದನ್ನು ಕಂಡು ಓಡಿ ಹೋಗಿದ್ದಾರೆ.ಹಲ್ಲೆ ವೇಳೆ ಶಾಂತಿ ಅವರ ಬ್ಯಾಗ್‌ ನೆಲಕ್ಕೆ ಬಿದ್ದಿದ್ದು, ಅನಂತರ ಅದನ್ನು ಪರಿಶೀಲಿಸಿದಾಗ ಅದರಲ್ಲಿದ್ದ 6,000 ರೂ. ಹಣ ನಾಪತ್ತೆಯಾಗಿದೆ ಎಂದು ದೂರಲಾಗಿದೆ.

ಘಟನೆಯ ಬಳಿಕ ಶಾಂತಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ.ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com