ಸಾಮಾಜಿಕ‌ ಜಾಲತಾಣಗಳ ಪೋಸ್ಟ್ ಮೇಲೆ ಮಂಗಳೂರು ಪೊಲೀಸರ ಕಣ್ಣು, ಪ್ರಚೋದನಾತ್ಮಕ ಪೋಸ್ಟ್ ಫಾರ್ವರ್ಡ್‌ ಮಾಡಿದ್ರೂ ಬೀಳುತ್ತೆ ಕೇಸ್!

ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಎಚ್ಚರಿಕೆ ನೀಡಿದ್ದಾರೆ.

ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್‌ಗಳ ಮೇಲೆ ನಿಗಾ ಇಡಲು “ಸೋಶಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌’ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಚೋದನಾಕಾರಿ ಸಂದೇಶ ಪೋಸ್ಟ್‌ ಮಾಡುವುದು, ಫಾರ್ವರ್ಡ್‌ ಮಾಡುವುದು, ಲೈಕ್‌, ಕಮೆಂಟ್‌ ಮಾಡುವುದು ಅಪರಾಧವಾಗಿದ್ದು ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನು ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ ಮತ್ತು ದ್ವೇಷದ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com