ಮಂಗಳೂರು:ನೆರೆ ಮನೆಯ ಮಹಿಳೆ ಸ್ನಾನ ಮಾಡುವಾಗ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದ ಸಂಘಪರಿವಾರದ ಕಾರ್ಯಕರ್ತ ಎನ್ನಲಾದ ಆರೋಪಿಗೆ ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದೆ.ಈತ ಹಿಂದೂ ಜಾಗರಣ ವೇದಿಕೆ ಪಕ್ಷಿಕೆರೆ ಘಟಕದ ಸಕ್ರೀಯ ಕಾರ್ಯಕರ್ತ ಎಂದು ವರದಿಯಾಗಿದೆ.
ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಸ್ನಾನ ಮಾಡುವಾಗ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ.
ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಮೊಬೈಲ್ ಸಹಿತ ಆರೋಪಿಯನ್ನು ವಶಕ್ಕೆ ಪಡೆದು ಬಳಿಕ ಜಾಮೀನು ನೀಡಿದ್ದಾರೆ ಎಂದು ವರದಿಯಾಗಿದೆ.