ಮಂಗಳೂರು; ಸಮುದ್ರ ತೀರದಲ್ಲಿ ಇಬ್ಬರ ಮೃತದೇಹ ಪತ್ತೆ

ಮಂಗಳೂರು;ಪಣಂಬೂರು ಬಳಿಯ ಸಮುದ್ರ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಮೃತರನ್ನು ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದೆ.

ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರು ಕೂಡ ಸಂಬಂಧಿಕರು ಎನ್ನಲಾಗಿದೆ‌.

ಬೆಂಗಳೂರು ಮೂಲದರಾಗಿರುವ ಇವರ ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು ಮಂಗಳೂರಿಗೆ ಬಂದಿದ್ದಾರೆ.

ಟಾಪ್ ನ್ಯೂಸ್