ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ಗುವಾಹಟಿ: ಮಣಿಪುರದ ರಾಜಧಾನಿ ಇಂಫಾಲ್ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

17 ವರ್ಷದ ಬಾಲಕಿ ಹಿಜಾಮ್ ಲಿಂಥೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೆಮ್ಜಿತ್ ಅವರ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಸೇರಿ ಭಾರಿ ಪ್ರತಿಭಟನೆ ನಡೆಸಿದರು.

ಇಬ್ಬರು ವಿದ್ಯಾರ್ಥಿಗಳು ಶಸ್ತ್ರಸಜ್ಜಿತ ಇಬ್ಬರು ವ್ಯಕ್ತಿಗಳೊಂದಿಗೆ ಇರುವ ಒಂದು ಫೋಟೋ ಹಾಗೂ ಮೃತದೇಹ ಇರುವ ಇನ್ನೊಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯಾದ ಇಬ್ಬರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಅಲ್ಲದೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ, ಅವರನ್ನು ಚದುರಿಸಲು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ಅಶ್ರುವಾಯುಗಳನ್ನು ಸಿಡಿಸಿದರು.

ಘಟನೆಯಲ್ಲಿ 50 ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದರ ಬೆನ್ನಲ್ಲೇ ಮಣಿಪುರ ಸರ್ಕಾರ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿದೆ.

ಟಾಪ್ ನ್ಯೂಸ್