ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ, ಓರ್ವ ಆರೋಪಿಯ ಬಂಧನ

ಮಣಿಪುರ;ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದ್ದು, ಆತ ಟೀಶರ್ಟ್ ಧರಿಸಿರುವ ವಿಡಿಯೋ ವೈರಲ್ ಆಗಿದ್ದು, ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿತ್ತು. ಇದೀಗ ವಿಡಿಯೋ ಹೊರಬಿದ್ದಿದೆ.

ಇದೀಗ ಈ ವಿಡಿಯೋವನ್ನು ತೆಗೆದುಹಾಕುವಂತೆ ಕೇಂದ್ರ ಸರಕಾರ ಗುರುವಾರ ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

ಪ್ರಕರಣ ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದೆ.ಸುಪ್ರೀಂಕೋರ್ಟ್ ಕೂಡ ತರಾಟೆಗೆ ತೆಗೆದುಕೊಂಡಿದೆ.ಪ್ರಧಾನಿ ಮೋದಿ ಮೊದಲ ಬಾರಿಗೆ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್