ಮಣಿಪುರದಲ್ಲಿ ಹಿಂಸಾಚಾರಕ್ಕೆ ಎಷ್ಟು ಮಂದಿ ಬಲಿಯಾಗಿದ್ದಾರೆ? ಎಷ್ಟು ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ? ಇಲ್ಲಿದೆ ಶಾಕಿಂಗ್ ರಿಪೋರ್ಟ್

ಇಂಫಾಲ್:ಮಣಿಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. ಇಂದು ಇಂಫಾಲ್ ಕಣಿವೆಯಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಿದ್ದು, ಅಂಗಡಿಗಳು ಮತ್ತು ಮಾರುಕಟ್ಟೆಗಳು ಎಂದಿನಂತೆ ಆರಂಭವಾಗಿವೆ.

ರಸ್ತೆಗಳಲ್ಲಿ ವಾಹನಗಳ ಸಂಚಾರ ಸಹ ಆರಂಭವಾಗಿದೆ. ಇಂಫಾಲ್ ನ ಪ್ರಮುಖ ಪ್ರದೇಶಗಳು ಮತ್ತು ರಸ್ತೆಗಳಲ್ಲಿ ಹೆಚ್ಚಿನ ಸೇನಾ ಪಡೆಗಳು ಹಾಗೂ ಕೇಂದ್ರ ಪೊಲೀಸ್ ಪಡೆಗಳ ನಿಯೋಜನೆ ಮೂಲಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಮಣಿಪುರ ಹಿಂಸಾಚಾರದಲ್ಲಿ ಇದುವರೆಗೆ 54 ಮಂದಿ ಮೃತಪಟ್ಟಿದ್ದು, ಈ ಪೈಕಿ 16 ಶವಗಳನ್ನು ಚುರಾಚಂದ್ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. 15 ಮೃತದೇಹಗಳು ಇಂಫಾಲ್ ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್ನಲ್ಲಿರುವ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಏತನ್ಮಧ್ಯೆ, ಶುಕ್ರವಾರ ರಾತ್ರಿ ಚುರಾಚಂದ್ಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಐವರು ಗುಡ್ಡಗಾಡು ಮೂಲದ ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಂಡಿಯಾ ರಿಸರ್ವ್ ಬೆಟಾಲಿಯನ್ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ ನಂತರ ಬುಧವಾರ ಹಿಂಸಾಚಾರ ಭುಗಿಲೆದ್ದಿತು.

ಕಳೆದ ತಿಂಗಳು ವಿಚಾರಣೆಯನ್ನು ನಡೆಸಿದ ಮಣಿಪುರ ಉಚ್ಚ ನ್ಯಾಯಾಲಯವು, ಮೈತೇಯಿ ಸಮುದಾಯದ ಬೇಡಿಕೆಯ ಅರ್ಜಿಗಳನ್ನು ಪರಿಗಣಿಸಲು ಮತ್ತು ಅದನ್ನು “ತ್ವರಿತವಾಗಿ” ವಿಲೇವಾರಿ ಮಾಡಲು ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು.

ಮಣಿಪುರದ 16 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಸುಮಾರು 20,000 ಜನರು ನಿರಾಶ್ರಿತರಾಗಿದ್ದಾರೆ ಮತ್ತು ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com