-ಆದಿಲ್ ಮೃತಪಟ್ಟ ವಿದ್ಯಾರ್ಥಿ
ಮಂಜೇಶ್ವರ:ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ.
ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟ ವಿದ್ಯಾರ್ಥಿ. ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.
ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಆದಿಲ್
ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಕುರಿತು ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.