ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ

ತುಮಕೂರು:ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಥಸಂದ್ರ ಗ್ರಾಮದಲ್ಲಿ ನಡೆದಿದೆ.

ಮನು (30) ಸಾವನ್ನಪ್ಪಿದ ಮಹಿಳೆ.

ಮನು ತನ್ನ ಇಬ್ಬರು ಮಕ್ಕಳ ಜೊತೆ ಬಟ್ಟೆ ತೊಳೆಯಲೆಂದು ಕೆರೆಗೆ ಬಳಿ ಹೋಗಿದ್ದರು.ಈ ವೇಳೆ ಅಲ್ಲಿ ಆಟವಾಡುತ್ತಿದ್ದ ಮಕ್ಕಳು ಕೆರೆಗೆ ಬಿದ್ದಿದ್ದಾರೆ.ಈಜು ಬಾರದ ಮನು ತನ್ನ ಜೀವವನ್ನು ಲೆಕ್ಕಿಸದೆ ಕರೆಗೆ ಹಾರಿ ಕರುಳಕುಡಿಗಳನ್ನು ರಕ್ಷಿಸಿ ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅಸ್ವಸ್ಥಗೊಂಡ ಇಬ್ಬರು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್