ವರದಕ್ಷಿಣೆ ಕೇಳಿದ ಮಗನಿಗೆ ಚಪ್ಪಲಿಯಲ್ಲಿ ಹೊಡೆದ ತಂದೆ; ವಿಡಿಯೋ ವೈರಲ್…

ವಯಸ್ಸಾದ ವ್ಯಕ್ತಿಯೊಬ್ಬರು ವರನ ಕೊರಳಪಟ್ಟಿಯನ್ನು ಹಿಡಿದು ಆತನಿಗೆ ಚಪ್ಪಲಿಯಿಂದ ಹೊಡೆಯುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಸಂದರ್ಭದಲ್ಲಿ ಸಭೆಯಲ್ಲಿದ್ದ ಅನೇಕ ವ್ಯಕ್ತಿಗಳು ಮಧ್ಯಪ್ರವೇಶಿಸಿ ಹಿರಿಯ ವ್ಯಕ್ತಿಯನ್ನು ಎಳೆದೊಯ್ಯುತ್ತಾರೆ. ವೀಡಿಯೋದಲ್ಲಿ ಹಲ್ಲೆ ನಡೆಸಿದ ವ್ಯಕ್ತಿ ವರನ ತಂದೆ ಎನ್ನಲಾಗಿದೆ.ಇದು ಎಲ್ಲಿ ನಡೆದ ಘಟನೆಯ ವಿಡಿಯೋ ಎಂಬುವುದು ಸ್ಪಷ್ಟವಾಗಿಲ್ಲ.

ಮಗ ವಧುವಿನ ಕುಟುಂಬದಿಂದ ವರದಕ್ಷಿಣೆ ಕೇಳಿದ್ದಕ್ಕಾಗಿ ಹಿಗ್ಗಾಮುಗ್ಗಾ ಹೊಡೆದಿದ್ದಾರೆ ಎಂದು ಹೇಳಲಾಗಿದೆ.

ಇಷ್ಟೇ ಅಲ್ಲದೆ ನಾನು ನನ್ನ ಜಮೀನು ಮಾರಿ ನಿನಗೆ ಮೋಟಾರ್ ಸೈಕಲ್ ಕೊಡುತ್ತೇನೆ. ನೀನು ನನ್ನ ಸೊಸೆಯನ್ನು ಕರೆದುಕೊಂಡು ಮನೆಗೆ ಬಾ ಎಂದು ವರನ ತಂದೆ ಹೇಳುವುದನ್ನು ವೀಡಿಯೋದಲ್ಲಿ ಕೇಳಬಹುದು.

ಹಸ್ನಾ ಜರೂರಿ ಹೈ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.ಅಳುತ್ತಲೇ ವರನೂ ಈ ಷರತ್ತನ್ನು ಒಪ್ಪಿಕೊಳ್ಳುತ್ತಾನೆ. ಅಂತಿಮವಾಗಿ, ವಧುವಿನ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ವಧುವಿಗೆ ನಗು ನಗುತ್ತಲೇ ಹಾಡಿನ ಮೂಲಕ ವಿದಾಯ ಕೋರುತ್ತಾರೆ.

ಟ್ವಿಟರ್‌ನಲ್ಲಿ ವೈರಲ್ ಆಗಿರುವ ಈ ವೀಡಿಯೋವನ್ನು ಈವರೆಗೆ 88 ಸಾವಿರ ಬಾರಿ ವೀಕ್ಷಿಸಲಾಗಿದೆ.ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಂಚಿ;ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

ರಾಂಚಿ; ಮದುವೆ ಮನೆಯಲ್ಲಿ ಬಿಂದಾಸ್ ಅಗಿ ಡಾನ್ಸ್‌ ಮಾಡ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೃತರನ್ನು ಭಿಲಾಯ್ ಸ್ಟೀಲ್ ಪ್ಲಾಂಟ್ ಮ್ಯಾನೇಜರ್ ದಿಲೀಪ್ ಎಂದು ಗುರುತಿಸಲಾಗಿದೆ. ತಮ್ಮ ಸಂಬಂಧಿಯೊಬ್ಬರ ಮದುವೆ ಸಮಾರಂಭದಲ್ಲಿ ವೇದಿಕೆ ಮೇಲಿದ್ದ ಅವರು ವಧು ವರರು ಹಾಗೂ ಇತರ ಮೂವರ ಜೊತೆಗೂಡಿ ಪಂಜಾಬ್ ಹಾಡಿಗೆ  ಹೆಜ್ಜೆ ಹಾಕುತ್ತಿದ್ದರು.

ಈ ವೇಳೆ ಉಸಿರಾಟದ ಸಮಸ್ಯೆ ಆಗಿದ್ದು, ಸ್ಟೇಜ್‌ನಲ್ಲೇ ಅವರು ನೆಲದ ಮೇಲೆ ಕುಳಿತುಕೊಳ್ಳುತ್ತಾರೆ. ಅದಾದ ಕೆಲ ಕ್ಷಣದಲ್ಲಿ ಅವರು ಕುಳಿತಲ್ಲಿಯೇ ನೆಲಕ್ಕೆ ಒರಗಿ ಪ್ರಾಣ ಕಳೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com