BIG NEWS ; ಮ್ಯಾನ್ಮಾರ್ ಸೇನೆಯ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿ 100 ಮಂದಿ ಮೃತ್ಯು, ತಮ್ಮದೆ ನಾಗರಿಕರ‌ ಮೇಲೆ ದಾಳಿ ನಡೆಸಿದ ಸೇನೆ!

ಬ್ಯಾಂಕಾಕ್;ಮ್ಯಾನ್ಮಾರ್ ಸೇನೆಯ ವೈಮಾನಿಕ ದಾಳಿಯಲ್ಲಿ ಹಲವಾರು ಮಕ್ಕಳು ಸೇರಿದಂತೆ 100 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸದೆ.

ಸೇನಾ ಆಡಳಿತದ ವಿರೋಧಿಗಳು ನಡೆಸಿದ ಸಮಾರಂಭದಲ್ಲಿ ಭಾಗವಹಿಸಿದ್ದ ಜನರ ಮೇಲೆ ದಾಳಿ ನಡೆದಿದೆ. ಸೇನೆಯು ನಾಗರಿಕರ ಗುಂಪಿನ ಮೇಲೆ ವಾಯುದಾಳಿ ನಡೆಸಿದ್ದು, ಮಕ್ಕಳು ಸೇರಿ ಸುಮಾರು 100 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮ್ಯಾನ್ಮಾರ್‌ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚ್ಯುತಿಗೊಳಿಸಿ 2021ರ ಫೆಬ್ರವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ಮಾಡುತ್ತಿದೆ.

ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ.ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ಮಾಡಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com