ಮೊಟ್ಟೆಯಿಂದ ತಯಾರಿಸುವ ‘ಮಯೋನೆಸ್’ನ್ನು ನಿಷೇಧಿಸಿದ ಕೇರಳ ಸರಕಾರ;ಇದು ಹೇಗೆ ವಿಷಪೂರಿತವಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

ತಿರುವನಂತಪುರಂ:ಕೇರಳ ಸರ್ಕಾರವು ಮೊಟ್ಟೆ ಬಳಸಿ ಮಾಡುವ ‘ಮಯೋನೆಸ್’ನ್ನು (mayonnaise) ನಿಷೇಧಿಸಿ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಆಹಾರ ವಿಷಪೂರಿತಗೊಂಡ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಕೇರಳ ಸರ್ಕಾರ ಗುರುವಾರ ಎಲ್ಲಾ ಹೋಟೆಲ್‌ಗಳಲ್ಲಿ ಮೊಟ್ಟೆಯಿಂದ ತಯಾರಿಸಿದ ಮಯೋನೆಸ್ ನ್ನು ನಿಷೇಧಿಸಿದೆ.

ರಾಜ್ಯದಲ್ಲಿ ಎಲ್ಲಾ ಹೋಟೆಲ್‌ಗಳಲ್ಲಿ ಮೊಟ್ಟೆಯಿಂದ ತಯಾರಿಸಿದ ಮಯೋನೆಸ್ ನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.

ಕಳೆದ ಎರಡು ವಾರಗಳಲ್ಲಿ ರಾಜ್ಯಾದ್ಯಂತ ಕನಿಷ್ಠ ಎರಡು ಡಜನ್ ಶಂಕಿತ ಪುಡ್ ಪಾಯಿಸನಿಂಗ್ ಪ್ರಕರಣಗಳು ವರದಿಯಾಗಿವೆ, ಕೆಲವು ಮಯೋನೆಸ್ ಸೇವನೆಯಿಂದಾಗಿ ಉಂಟಾಗಿದೆ.

ಎಣ್ಣೆ, ಮೊಟ್ಟೆಯ ಹಳದಿ ಲೋಳೆ ಮತ್ತು ಆಮ್ಲೀಯ ದ್ರವ (ನಿಂಬೆ ರಸ ಅಥವಾ ವಿನೆಗರ್) ಇದರ ತಯಾರಿಗೆ ಬಳಸಲಾಗುತ್ತದೆ. ಮೇಯನೇಸ್ ನ್ನು ಹೆಚ್ಚಾಗಿ ಸ್ಯಾಂಡ್‌ವಿಚ್‌ಗಳು, ಬರ್ಗರ್‌ಗಳು, ಸಲಾಡ್‌ಗಳು ಮತ್ತು ಫ್ರೆಂಚ್ ಫ್ರೈಗಳಲ್ಲಿ ಬಳಸಲಾಗುತ್ತದೆ.

ಸರಿಯಾಗಿ ಸಂಗ್ರಹಿಸದ ಮೇಯನೇಸ್ ಬ್ಯಾಕ್ಟೀರಿಯಾದ ತಾಣವಾಗಿರಬಹುದು ಎಂದು ಆಹಾರ ತಜ್ಞರು ಹೇಳಿದ್ದಾರೆ. ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಬಳಸುವ ಹಸಿ ಮೊಟ್ಟೆಯ ಬಿಳಿಭಾಗವು ಹಳೆಯದಾದರೆ, ಅವು ಹಾನಿಕಾರಕ ಬ್ಯಾಕ್ಟೀರಿಯಾವನ್ನು ಉತ್ಪಾದಿಸಲು ಪ್ರಾರಂಭಿಸುತ್ತವೆ ಎಂದು ಅವರು ಹೇಳಿದರು.

ಇದಲ್ಲದೆ, ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಬೇಯಿಸದ ಮೊಟ್ಟೆಗಳಲ್ಲಿ ಕಂಡುಬರುತ್ತವೆ.ಇನ್ನು ತರಕಾರಿ ‘ಮಯೋನೆಸ್’ ಗಳಿಗೆ ವಿನಾಯಿತಿ ನೀಡಲಾಗಿದೆ.

ಇನ್ನು ಎಲ್ಲಾ ಆಹಾರ ಪೊಟ್ಟಣಗಳ ಮೇಲೆ ಆಹಾರ ತಯಾರಿಸುವ ದಿನಾಂಕ ಮತ್ತು ವಿತರಣೆಯ ಸಮಯ ಮತ್ತು ಅದರ ಬಳಕೆ ಯೋಗ್ಯವಾದ ದಿನಾಂಕವನ್ನು ನಮೂದಿಸುವುದು ಕೂಡ ಕಡ್ಡಾಯವಾಗಿದೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com