ಯುವಕನಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್, ವಿಡಿಯೊ ವೈರಲ್ ಬೆನ್ನಲ್ಲೇ ಅವರು ಹೇಳಿದ್ದೇನು ಗೊತ್ತಾ?

ಬೆಂಗಳೂರು;ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಅವರು ಯುವಕನೋರ್ವನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ಬಿಜೆಪಿ ಭಾನುವಾರ ಹಂಚಿಕೊಂಡಿತ್ತು.

ಈ ಬಗ್ಗೆ ಕಾಂಗ್ರೆಸ್ ಕುರಿತು ಟೀಕಿಸಿರುವ ಬಿಜೆಪಿ, ತನ್ನ ಕುಂದುಕೊರತೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಯುವಕನ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದೆ.

ಗೂಂಡಾಗಿರಿ ಕಾಂಗ್ರೆಸ್ ನ ಡಿಎನ್‌ಎಯಲ್ಲಿದೆ. ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ತಮ್ಮ ಕುಂದುಕೊರತೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಘಟನೆಯ ಬಗ್ಗೆ ಎಂ ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಅದು ಹಲ್ಲೆ ಅಲ್ಲ, ನಾನು ಹಲ್ಲೆಯನ್ನು ಮಾಡುವವನಲ್ಲ. ಯುವಕ ಸಭೆಯಲ್ಲಿ ಹಿರಿಯರೊಬ್ಬರಿಗೆ ತೀರಾ ಅಶ್ಲೀಲ ಪದಗಳಲ್ಲಿ ನಿಂದಿಸಿದ್ದಕ್ಕೆ ನನಗೆ ಸಿಟ್ಟು ಬಂತು. ಹೀಗಾಗಿ ಕೆನ್ನೆಗೆ ಎರಡು ಬಾರಿಸಿದ್ದೇನೆ. ನಾನು ಕೂಡ ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಸಣ್ಣ ಹುಡುಗ ತಪ್ಪು ಮಾಡಿದಾಗ ತಿದ್ದಿ ಹೇಳಿದ್ದೇನೆ ಎಂದಿದ್ದಾರೆ.

ದೇವಾಪೂರ ಗ್ರಾಮದ ಮಲ್ಲಿಕಾರ್ಜುನ ದೇಗುಲದ ಬಳಿ ರಸ್ತೆಯಲ್ಲಿ ಮೊಳಕಾಲಿನಷ್ಟು ನೀರು ನಿಲ್ಲುತ್ತವೆ ಎಂದು ಗಮನಕ್ಕೆ ತಂದಿದ್ದಾನೆ. ಈ ವೇಳೆ ಇದಕ್ಕೆ ಯಾರು ಜವಾಬ್ದಾರಿ ಎಂದು ಜೋರು ಮಾಡಿದ್ದಾನೆ. ಅಲ್ಲಿದ್ದ ಗ್ರಾಮದ ಹಿರಿಯರೊಬ್ಬರು ಇಂತಹ ಸಣ್ಣ ಸಮಸ್ಯೆಯನ್ನ ಪಂಚಾಯ್ತಿ ಅವರ ಹತ್ರ ಕೇಳಬೇಕು.ಅದನ್ನು ಬಿಟ್ಟು ಶಾಸಕರ ಬಳಿ ಕೇಳಿದರೆ ಹೇಗೆ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಯುವಕ ಬುದ್ಧಿ ಹೇಳಲು ಬಂದ ಹಿರಿಯನಿಗೆ ಅಶ್ಲೀಲವಾಗಿ ನಿಂದಿಸಿದ್ದಾನೆ ಎನ್ನಲಾಗಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com