ಮಂಗಳೂರು; ವಿದ್ಯಾರ್ಥಿನಿ ನಿಲಯದ ಕಟ್ಟಡದಿಂದ ಜಿಗಿದು
ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಅವರು ಕಟ್ಟಡದ 6ನೇ ಮಹಡಿಯಿಂದ ಕೆಳಗೆ ಜಿಗಿದಿದ್ದರು.
ಅವರು ಪತ್ರವೊಂದನ್ನು ಬರೆದಿಟ್ಟಿದ್ದು,ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ಪವಿತ್ರಾ ಶೆಟ್ಟಿ ಅವರ ಪೋಷಕರು ಪ್ರಸ್ತುತ ಅಥಣಿಯಲ್ಲಿ ನೆಲೆಸಿದ್ದಾರೆ. ಅವರ ತಾಯಿ ಕಾರ್ಕಳದವರು ಎನ್ನಲಾಗಿದೆ.