ಬಂಟ್ವಾಳ; ಬಾಲಕಿಗೆ ಕಿರುಕುಳ; ಪೋಕ್ಸೋ ಕೇಸ್ ದಾಖಲು

ಬಂಟ್ವಾಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನರಿಕೊಂಬು ನಿವಾಸಿ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಂದೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.

ಮೆಲ್ಕಾರ್ ಬಳಿ ಕಾಲೇಜಿನಿಂದ ಮನೆಗೆ ಹೋಗಲು ರಸ್ತೆ ಬದಿಯಲ್ಲಿ ಬಾಲಕಿ ಬಸ್ ಗಾಗಿ ಕಾಯುತ್ತಾ ನಿಂತಿದ್ದಾಗ, ಬೈಕಿನಲ್ಲಿ ಬಂದ ಯುವಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಗೆ ಯುವಕ ಕಿರುಕುಳ ನೀಡಿದ ಕಾರಣ ಹೆದರಿದ ಬಾಲಕಿ ಮೂರ್ಚೆ ಹೋಗಿ ರಸ್ತೆ ಬದಿ ಬಿದ್ದಿದ್ದಳು ಎನ್ನಲಾಗಿದೆ.

ವಿಷಯ ತಿಳಿದ ಬಾಲಕಿಯ ತಂದೆ ಬಾಲಕಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಬಳಿಕ ನಗರ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ