ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿಬಿದ್ದು ತಾಯಿ ಮಗು ಮೃತ್ಯು

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆದಿದೆ.

ಪತಿ, ಪತ್ನಿ ಹಾಗೂ ಮಗು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್‌ಗಳು ಬಿದ್ದಿದೆ. ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಾಯಿ, ಮಗು ಸಾವನ್ನಪ್ಪಿದ್ದಾರೆ.

ಮೃತರನ್ನು ತೇಜಸ್ವಿನಿ (28) ಎರಡೂವರೆ ವರ್ಷದ ವಿಹಾನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್