ರಾಜ್ಯದಲ್ಲಿ ಹಾಲಿನ ದರ ಪ್ರತಿ ಲೀಟರ್ ಗೆ 3ರೂ. ಹೆಚ್ಚಳ

ಬೆಂಗಳೂರು;ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್ ಸುದ್ದಿ ಇದಾಗಿದ್ದು, ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳ ಮಾಡಲಾಗಿದೆ.

ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು.

ಈ ಸಭೆಯಲ್ಲಿ ಹಾಲು ಒಕ್ಕೂಟಗಳು ನೀಡಿರುವಂತ ನಂದಿನಿ ದರ 5 ರೂ ಹೆಚ್ಚಳ ಪ್ರಸ್ತಾನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದ್ದಾರೆ.

ಅಲ್ಲದೆ ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎ‌ನ್ನಲಾಗಿದೆ.

ಅಂತಿಮವಾಗಿ ಇಂದಿನ ಸಿಎಂ ನೇತೃತ್ವದ ಸಭೆಯಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ದರವನ್ನು ರೂ.3 ಹೆಚ್ಚಳ ಮಾಡುವಂತಹ ನಿರ್ಧಾರವನ್ನು ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು