ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ; ಆನ್ ಲೈನ್ ಗೇಮ್ ಗೆ ಮತ್ತೋರ್ವ ಬಲಿ?

ಶಿವಮೊಗ್ಗ;ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಬಳಿಯ ಕಟ್ಟೆಹಕ್ಲಿನಲ್ಲಿ ನಡೆದಿದೆ.

22 ವರ್ಷದ ಮಿಥುನ್ ಹೆಚ್ಚಾಗಿ ಆನ್‌ಲೈನ್‌ ಬೆಟ್ಟಿಂಗ್ ಗೇಮ್‌ಗಳನ್ನು ಆಡುತ್ತಿದ್ದ ಎನ್ನಲಾಗಿದೆ.ಇದರಿಂದ ಸಾಲ ಮಾಡಿಕೊಂಡಿದ್ದನಂತೆ.ಸಾಲ ತೀರಿಸಲಾಗದೆ ನೇಣುಹಾಕಿಕೊಂಡಿದ್ದಾನೆ ಎಂಬ ಮಾತುಗಳು ಕೇಳಿ ಬಂದಿದೆ.

ಮಿಥುನ್ ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಕ್ಲಿನಲ್ಲಿ ಮೊಬೈಲ್ ಶಾಪ್ ಮಾಡಿಕೊಂಡು ಜೀವನ ನಡೆಸುತ್ತಿದ್ದ. ತನ್ನ ಮೊಬೈಲ್ ಶಾಪ್​ನಲ್ಲೇ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ