ಪುತ್ರೂರು;ಮಿತ್ತೂರು ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ವಿಚಾರಣೆ ನಡೆಸಿ ಎನ್ ಐಎ ಫ್ರೀಡಂ ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಫ್ರೀಡಂ ಕಮ್ಯೂನಿಟಿ ಹಾಲ್ ನ್ನು ರಾಷ್ಟ್ರೀಯ ತನಿಖಾ ತಂಡ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಖ್ಯ ತನಿಖಾಧಿಕಾರಿ ಎಂ. ಷಣ್ಮುಗಂ ಮಿತ್ತೂರು ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಈ ಭೂಮಿಯ ಕಟ್ಟಡವನ್ನು ಮಾರಾಟ, ಬಾಡಿಗೆಗೆ ನೀಡುವುದಾಗಲಿ, ಯಾವುದೇ ಬದಲಾವಣೆ ಮಾಡುವುದಾಗಲಿ, ಬಳಸಿಕೊಳ್ಳುವುದಕ್ಕೆ ಸಂಪೂರ್ಣವಾಗಿ ಎನ್‌ಐಎ ತಡೆ ನೀಡಿದೆ.