ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ; ಮಿಜೋರಾಂ ಸಿಎಂ ಏನೆಲ್ಲಾ ಹೇಳಿದ್ರು ಗೊತ್ತಾ?

ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಿಜೋರಾಂಗೆ ಬಂದರೆ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ.

ಮಿಜೋರಾಂನ ಜನರೆಲ್ಲರೂ ಕ್ರಿಶ್ಚಿಯನ್ನರು. ಮಣಿಪುರದಲ್ಲಿ ಮೇಟಿ ಜನರು ನೂರಾರು ಚರ್ಚ್‌ಗಳನ್ನು ಸುಟ್ಟುಹಾಕಿದಾಗ ಮಿಜೋರಾಂ ಜನರು ಇದನ್ನು ಸಂಪೂರ್ಣವಾಗಿ ವಿರೋಧಿಸಿದ್ದಾರೆ. ಈ ಸಮಯದಲ್ಲಿ ಬಿಜೆಪಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದು ನಮ್ಮ ಪಕ್ಷಕ್ಕೆ ದೊಡ್ಡ ಹೊಡೆತ ಕೊಡುತ್ತದೆ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ.

ಪ್ರಧಾನಿ ಬಂದು ವೇದಿಕೆಯಲ್ಲಿ ಅವರು ಒಬ್ಬರೇ ಇರಲಿ. ನಾನು ಮಾತ್ರ ಪ್ರತ್ಯೇಕವಾದ ವೇದಿಕೆಯಲ್ಲಿ ಚುನಾವಣೆ ಪ್ರಚಾರ ಮಾಡುತ್ತೇನೆ. ಮಿಜೋ ನ್ಯಾಷನಲ್ ಫ್ರಂಟ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಯಾಕೆಂದರೆ ನಮ್ಮ ಪಕ್ಷವು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿದೆ.

ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟದ ಭಾಗವಾಗಿದ್ದರೂ ಮಣಿಪುರದ ಹಿಂಸಾಚಾರದ ಹಿನ್ನೆಲೆ ಪ್ರಧಾನಿ ಮೋದಿಯ ಜೊತೆ ವೇದಿಕೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ.

ಟಾಪ್ ನ್ಯೂಸ್